ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಕೊರೊನಾ ಸ್ಫೋಟ: ಇಂದು 4246 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಬ್ಬರ ತೀವ್ರವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 4,246 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ 30,17,572 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 3.33ನಷ್ಟಿದೆ. ಇಂದು 1,27,328 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 362 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,61,772 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,357ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 17,414 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.04ನಷ್ಟಿದೆ.

ಬೆಂಗಳೂರು: ನಗರದಲ್ಲಿ ಇಂದು 3,605 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,72,050ಕ್ಕೆ ಏರಿಕೆಯಾಗಿದೆ 264 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,40,874ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,413 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 14,762 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

05/01/2022 07:15 pm

Cinque Terre

60.45 K

Cinque Terre

7