ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಹರಡುವಿಕೆ ತೀವ್ರಗತಿಯಲ್ಲಿ ಸಾಗಿದೆ. ಕಳೆದ 24 ಗಂಟೆಗಳಲ್ಲಿ 5,031 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಬ್ಬರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 30,22,603 ಜನರಿಗೆ ಸೋಂಕು ತಗುಲಿದ್ದು 38,358 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 271 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,62,043ಕ್ಕೆ ಏರಿಕೆಯಾಗಿದೆ. ಹಾಗೂ 22,173 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 3.95%ನಷ್ಟಿದೆ. ಹಾಗೂ ಮರಣ ಪ್ರಮಾಣ 0.01%ನಷ್ಟಿದೆ. ಇದೇ ಅವಧಿಯಲ್ಲಿ 1,27,194 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಮತ್ತೊಂದು ಶಾಕ್ ಕೊಟ್ಟಿದೆ. ಇಂದು ಒಂದೇ ದಿನದಲ್ಲಿ 4,324 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,76,374ಕ್ಕೆ ಏರಿಕೆಯಾಗಿದೆ. 172 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,41,046ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 16,414 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 18,913 ಸಕ್ರಿಯ ಪ್ರಕರಣಗಳಿವೆ.
PublicNext
06/01/2022 08:30 pm