ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಮಿಳುನಾಡಿನ ಓಂ ಶಕ್ತಿ ಯಾತ್ರೆಗೆ ಹೋಗಿದ್ದ 89 ಮಂಡ್ಯದ ಮಂದಿಗೆ ಕೊರೊನಾ

ಮಂಡ್ಯ: ಕೊರೊನಾ ಹಾಗೂ ಒಮಿಕ್ರಾನ್ ಭೀತಿಯ ನಡುವೆಯೂ ಮಂಡ್ಯ ಜಿಲ್ಲೆಯ ಹಲವು ಗ್ರಾಮಗಳ ಜನರು ತಮಿಳುನಾಡಿನ ಓಂ ಶಕ್ತಿ ಯಾತ್ರೆಗೆ ಹೋಗಿ ಬಂದಿದ್ದಾರೆ. ಇದರಲ್ಲಿ 89 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಯಾತ್ರೆ ಮುಗಿಸಿ ಬಂದ 360 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಕೊರೊನಾ ಸೋಂಕು ದೃಢಪಟ್ಟವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೋವಿಡ್ ನೆಗೆಟಿವ್ ರಿಪೋರ್ಟ್ ಬಂದವರಿಗೆ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಅವರೆಲ್ಲರಿಗೂ 7 ದಿನ ಬಳಿಕ ಮತ್ತೊಮ್ಮೆ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ.

Edited By : Nagaraj Tulugeri
PublicNext

PublicNext

07/01/2022 10:56 am

Cinque Terre

46.39 K

Cinque Terre

1