ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಲಿದೆ. ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಸೋಂಕುಗಳು ಪತ್ತೆಯಾಗಿದ್ದು, 302 ಮಂದಿ ಮೃತಪಟ್ಟಿದ್ದಾರೆ.
ಕಳೆದ ದಿನ ವರದಿಯಾದ ಪ್ರಕರಣಗಳ ಸಂಖ್ಯೆಗಿಂತ ಇಂದು ಶೇ. 25-30ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಈಗ 3,71,363 ಸಕ್ರಿಯ ಪ್ರಕರಣಗಳಿವೆ. ಓಮಿಕ್ರಾನ್ ಸಂಖ್ಯೆ ಕೂಡಾ 3,007 ದಾಟಿದೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಪ್ರಕರಣಗಳ ಉಲ್ಬಣದಿಂದಾಗಿ ಶಾಲೆಗಳನ್ನು ಮುಚ್ಚುವುದು, ಸಾರ್ವಜನಿಕ ಸಾರಿಗೆಯ ಮೇಲಿನ ನಿರ್ಬಂಧಗಳು ಮತ್ತು ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂ ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಹಲವಾರು ರಾಜ್ಯಗಳು ತೆಗೆದುಕೊಂಡಿವೆ.
ಕಳೆದ 24 ಗಂಟೆಗಳಲ್ಲಿ 302 ಕೋವಿಡ್ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಇದುವರೆಗೆ 4,83,178 ಸಾವುಗಳು ಸಂಭವಿಸಿವೆ. ಜನವರಿ 16 ರಿಂದ ದೇಶಾದ್ಯಂತ ಕೊರೊನಾ ಲಸಿಕಾ ಅಭಿಯಾನ ಆರಂಭಿಸಲಾಗಿದ್ದು, ಈವರೆಗೆ 149.66 ಕೋಟಿಗೂ ಅಧಿಕ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.
PublicNext
07/01/2022 02:43 pm