ದಾವಣಗೆರೆ: ಓಂ ಶಕ್ತಿ ಕಾರ್ಯಕ್ರಮಕ್ಕೆ ತೆರಳಿದ್ದವರ ಪೈಕಿ ಇಬ್ಬರು ಮಹಿಳೆಯರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಒಂದೇ ಗ್ರಾಮದ 43 ಜನರು ಓಂ ಶಕ್ತಿ ಕಾರ್ಯಕ್ರಮಕ್ಕೆ ತೆರಳಿದ್ದರು. ಅವರಲ್ಲಿ ಇಬ್ಬರು ಮಹಿಳೆಯರಿಗೆ ಸೋಂಕು ತಗುಲಿದೆ.ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೆಂಪಯ್ಯನ ತೊಕ್ಕಲು ಗ್ರಾಮದ ಇಬ್ಬರು ಮಹಿಳೆಯರಿಗೆ ಕೊರೊನಾ ತಗುಲಿರುವುದು ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಜನವರಿ 3 ರಂದು ಓಂ ಶಕ್ತಿಗೆ ಬಸ್ ನಲ್ಲಿ ತೆರಳಿದ್ದರು. ಅವರು ಎರಡು ದಿನಗಳ ಬಳಿಕ ಗ್ರಾಮಕ್ಕೆ ವಾಪಸ್ ಆಗಿದ್ದರು. ಈ ವಿಷಯ ತಿಳಿದು ನಿನ್ನೆ ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಓಂ ಶಕ್ತಿಗೆ ತೆರಳಿದ್ದ 43 ಜನ ಮತ್ತು ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ರ‍್ಯಾಪಿಡ್ ಟೆಸ್ಟ್ ಮಾಡಿದ್ದ ವೇಳೆ ಬೆಳಕಿಗೆ ಬಂದಿದೆ.
ಈ ವೇಳೆ ಇಬ್ಬರು ಮಹಿಳೆಯರಿಗೆ ಸೋಂಕು ಇರುವುದು ಖಚಿತವಾಗಿದೆ. ಇಬ್ಬರು ಮಹಿಳೆಯರಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಊರಿಂದ ಯಾರು ಆಚೆ ಹೋಗಬಾರದು. ಬೇರೆ ಊರಿಂದ ಗ್ರಾಮಕ್ಕೆ ಯಾರೂ ಬರಬಾರದು ಎಂದು ನಿರ್ಬಂಧ ಹೇರಲಾಗಿದೆ.
PublicNext
08/01/2022 02:27 pm