ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಓಟ ತಗ್ಗುವಂತೆ ಕಾಣುತ್ತಿಲ್ಲ. ನಿನ್ನೆ 8,449 ಜನರಿಗೆ ಸೋಂಕು ದೃಢಪಟ್ಟಿದ್ದರೆ, ಇಂದು ಸೋಂಕಿತರ ಮತ್ತಷ್ಟು ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 7,113 ಪ್ರಕರಣಗಳು ದಾಖಲಾಗುವುದರೊಂದಿಗೆ ಪಾಸಿಟಿವಿಟಿ ಪ್ರಮಾಣವು ಬೆಂಗಳೂರಿನಲ್ಲಿ ಶೇ 10 ದಾಟಿದೆ. ಇನ್ನು ಶೇ. 79 ಪ್ರಕರಣಗಳೊಂದಿಗೆ ಕರ್ನಾಟಕದಲ್ಲಿ ಬೆಂಗಳೂರು ಕೋವಿಡ್‌ನ ಕೇಂದ್ರಬಿಂದುವಾಗಿದೆ.
ರಾಜ್ಯ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಟ್ವೀಟ್ ಮೂಲಕ ನೀಡಿರುವ ಮಾಹಿತಿ ಪ್ರಕಾರ, ಬೆಂಗಳೂರಿನ 7,113 ಜನರು ಸೇರಿ ರಾಜ್ಯದಲ್ಲಿ ಇಂದು ಒಟ್ಟು 8,906 ಜನರಿಗೆ ಕೊರೊನಾ ದೃಢಪಟ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 5.42 ನಷ್ಟಿದೆ. ರಾಜ್ಯದಲ್ಲಿ ಇಂದು 508 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು 38,507 ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿನಿಂದ ಇಂದು ಬೆಂಗಳೂರಿನ ಮೂವರು ಸೇರಿ ರಾಜ್ಯದಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 1,64,261 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
PublicNext
08/01/2022 06:25 pm