ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಬ್ಬರ ತೀವ್ರವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 8,906 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ 30,39,958 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 5.42ನಷ್ಟಿದೆ. ಇಂದು 1,64,261 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 508 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,63,056 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,366ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 30,113 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.04ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 7,113 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,90,299ಕ್ಕೆ ಏರಿಕೆಯಾಗಿದೆ 323 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,41,721ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಮೂವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,420 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 32,157 ಸಕ್ರಿಯ ಪ್ರಕರಣಗಳಿವೆ.
PublicNext
08/01/2022 07:19 pm