ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಏರಿಕೆ ಕಾಣುತ್ತಿದೆ. ಕಳೆದ 24 ಗಂಟೆಯಲ್ಲಿ 12,000 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ 30,51,958 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 6.33ನಷ್ಟಿದೆ. ಇಂದು 1,89,499 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 901 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,63,957 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,370ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 49,602 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.03ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 9,020 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,99,319ಕ್ಕೆ ಏರಿಕೆಯಾಗಿದೆ 605 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,42,326 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,422 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 40,570 ಸಕ್ರಿಯ ಪ್ರಕರಣಗಳಿವೆ.
PublicNext
09/01/2022 07:37 pm