ನವದೆಹಲಿ: ದೇಶದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಡೋಸ್ ಅಥವಾ ಬೂಸ್ಟರ್ ಡೋಸ್ ಅಗತ್ಯ ಇದೆ ಎಂಬ ಅಭಿಪ್ರಾಯಗಳು ಕೇಳಿ ಬಂದಿವೆ. ಹೀಗಾಗಿ ಭಾರತದಲ್ಲೂ ಇಂದಿನಿಂದ ಮುನ್ನೆಚ್ಚರಿಕಾ ವ್ಯಾಕ್ಸಿನ್ ಡೋಸ್ ಆರೋಗ್ಯ ಸಿಬ್ಬಂದಿ ಮತ್ತು 60 ವರ್ಷ ಮೇಲ್ಪಟ್ಟ ವಯೋಮಾನದ ಜನರಿಗೆ ಕೊಡಲಾಗುತ್ತಿದೆ.
ಕೊರೊನಾ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲೇ ಮುನ್ನೆಚ್ಚರಿಕಾ ಮೂರನೇ ಡೋಸ್ ನೀಡುವುದಾಗಿ ಕಳೆದ ತಿಂಗಳು ಘೋಷಿಸಿದ್ದರು.
ಪಂಚ ರಾಜ್ಯ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿಯನ್ನು ಮುಂಚೂಣಿ ಕಾರ್ಯಕರ್ತರನ್ನಾಗಿ ಪರಿಗಣಿಸಿರುವುದರಿಂದ ಅವರು ಬೂಸ್ಟರ್ ಡೋಸ್ ಪಡೆಯಲು ಅರ್ಹರಾಗಿರುತ್ತಾರೆ.
ಲಸಿಕೆ ಪಡೆಯುವುದು ಹೇಗೆ?
ಮುನ್ನೆಚ್ಚರಿಕೆಯ ಲಸಿಕೆ ಡೋಸ್‌ಗಳಿಗೆ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಅರ್ಹರು ನೇರವಾಗಿ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳಬಹುದು ಅಥವಾ ಯಾವುದೇ ಲಸಿಕಾ ಕೇಂದ್ರಕ್ಕೆ ಹೋಗಬಹುದು. ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್‌ಗಳ ಕುರಿತು ಇನ್ನೂ ಸಹ ಯಾವುದೇ ನಿರ್ಧಾರವಿಲ್ಲ.
PublicNext
10/01/2022 07:12 am