ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದ 1,79,723 ಜನರಿಗೆ ಸೋಂಕು ದೃಢಪಟ್ಟಿದೆ. ನಿನ್ನೆ (ಭಾನುವಾರಕ್ಕಿಂತ) 20,091 ಪ್ರಕರಣಗಳು ಏರಿಕೆಯಾಗಿದೆ.
ಮೇ 28, 2021ರಂದು 1,86,364 ಜನರಿಗೆ ಕೊರೊನಾ ಪತ್ತೆಯಾಗಿತ್ತು. ಇದಾದ ಬಳಿಕ ದೇಶದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕು ಇಂದು ಕಾಣಿಸಿಕೊಂಡಿದೆ. ಕಳೆದ ಏಳು ತಿಂಗಳಿನಲ್ಲಿ ಇದು ಒಂದು ದಿನದ ಅತಿದೊಡ್ಡ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ದೇಶದ 146 ಜನ ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,23,619ಕ್ಕೆ ಏರಿಕೆ ಕಂಡಿದ್ದು, ದೈನಂದಿನ ಪಾಸಿಟಿವಿಟಿ ದರವು ಶೇ. 13.29ಕ್ಕೆ ಏರಿಕೆಯಾಗಿದೆ.
PublicNext
10/01/2022 10:36 am