ನವದೆಹಲಿ: ಒಮಿಕ್ರಾನ್ ರೂಪಾಂತರಿ ವೈರಸ್ ಅಟ್ಟಹಾಸ ಇಡೀ ದೇಶವನ್ನೇ ಕಾಡುತ್ತಿದೆ. ಈ ನಡುವೆ ಕೊರೊನಾ ಮೂರನೇ ಅಲೆಯ ತೀವ್ರತೆಯೂ ಹೆಚ್ಚುತ್ತಿರುವ ನಡುವೆಯೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 800ಕ್ಕೂ ಹೆಚ್ಚು ವೈದ್ಯರು ಸೋಂಕಿಗೆ ತುತ್ತಾಗಿದ್ದಾರೆ. ಇವರೆಲ್ಲ ಪ್ರಮುಖ ಆಸ್ಪತ್ರೆಗಳ ವೈದ್ಯರೆಂದು ತಿಳಿದುಬಂದಿದೆ.
ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಸೋಂಕಿಗೆ ತುತ್ತಾಗಿ ಕರ್ತವ್ಯದಿಂದ ದೂರವಾಗುತ್ತಿರುವುದರಿಂದ ದೆಹಲಿ ಆಸ್ಪತ್ರೆಗಳಲ್ಲಿ ಒತ್ತಡ ಹೆಚ್ಚಾಗುತ್ತಿದೆ. ದೆಹಲಿಯ 5 ಪ್ರಮುಖ ಆಸ್ಪತ್ರೆಗಳ 800 ಕ್ಕೂ ಹೆಚ್ಚು ವೈದ್ಯರು ಕೋವಿಡ್ ಸೋಂಕಿಗೊಳಗಾಗಿದ್ದಾರೆ. ಈ ವೈದ್ಯರೊಂದಿಗೆ ಸಂಪರ್ಕಕ್ಕೆ ಬಂದ ಇತರೆ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಕೂಡ ಐಸೋಲೇಟ್ ಆಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಸಂಖ್ಯೆಯ ಆರೋಗ್ಯ ಕಾರ್ಯಕರ್ತರು ಸೋಂಕಿತರಾಗುತ್ತಿರುವುದರಿಂದ ಆರೋಗ್ಯ ವ್ಯವಸ್ಥೆ ತಾಳ ತಪ್ಪುತ್ತಿದೆ. ಇದರಿಂದ ಆಸ್ಪತ್ರೆಯಲ್ಲಿ ನಿತ್ಯ ತಪಾಸಣೆ, ಒಪಿಡಿ ಹಾಗೂ ಅನಗತ್ಯ ಶಸ್ತ್ರಚಿಕಿತ್ಸೆಗಳನ್ನು ನಿಲ್ಲಿಸಲಾಗುತ್ತಿದೆ.
PublicNext
10/01/2022 06:00 pm