ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮತ್ತೆ ಶುರುವಾಗಿದೆ ಕೊರೊನಾ ಅಟ್ಟಹಾಸ: ಇಂದು 11,698 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೊಮ್ಮೆ ಬೆಂಬಿಡದೇ ಕಾಡುವ ಸಾಧ್ಯತೆಗಳು ದಟ್ಟವಾಗಿವೆ. ಕಳೆದ 24 ಗಂಟೆಗಳಲ್ಲಿ 11,698 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 30,63,656 ಜನರಿಗೆ ಸೋಂಕು ತಗುಲಿದ್ದು, 38,374 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,148 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,65,105ಕ್ಕೆ ಏರಿಕೆಯಾಗಿದೆ. ಇನ್ನು 60,148 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 7.77%ನಷ್ಟಿದೆ. ಹಾಗೂ ಮರಣ ಪ್ರಮಾಣ 0.03%ನಷ್ಟಿದೆ. ಹಾಗೂ ಇದೇ ಅವಧಿಯಲ್ಲಿ 1,50,479 ಜನರನ್ನು ಕೊರೊನಾ ಸೋಂಕು ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಬೆಂಗಳೂರು ನಗರ: ರಾಜ್ಯದ ರಾಜಧಾನಿಯನ್ನು ಕೊರೊನಾ ಸೋಂಕು ಮತ್ತೆ ಬೆನ್ನಟ್ಟಿದೆ. ಇಂದು ಒಂದೇ ದಿನದಲ್ಲಿ 9,221 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 13,08,540 ಕ್ಕೆ ಏರಿಕೆಯಾಗಿದೆ. 829 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,43,155 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,424 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 48,960 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

10/01/2022 08:06 pm

Cinque Terre

75.63 K

Cinque Terre

0