ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

10 ದಿನದಲ್ಲಿ ದೆಹಲಿಯ ಸಾವಿರ ಪೊಲೀಸರಿಗೆ ಕೊರೊನಾ ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಅಟ್ಟಹಾಸ ಮುಂದುವರೆದಿದ್ದು, ಜನರಲ್ಲಿ ಆತಂಕ ಹೆಚ್ಚಿಸಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನವರಿ 1ರಿಂದ ಅಂದರೆ ಕಳೆದ 10 ದಿನಗಳಲ್ಲಿ ಸುಮಾರು ಒಂದು ಸಾವಿರ ಪೊಲೀಸ್ ಸಿಬ್ಬಂದಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ.

ಸಾರ್ವಜನಿಕ ಸಂಪರ್ಕಾಧಿಕಾರಿ ಮತ್ತು ಹೆಚ್ಚುವರಿ ಆಯುಕ್ತ ಚಿನ್ಮಾಯ್​ ಬಿಸ್ವಾಲ್​ ಸೇರಿದಂತೆ ಸುಮಾರು 1 ಸಾವಿರ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಎಲ್ಲಾ ಸೋಂಕಿತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಕ್ವಾರಂಟೈನ್ ಆಗಿದ್ದು, ಹೋಂ ಐಸೋಲೇಷನ್​ನಲ್ಲಿದ್ದಾರೆ ಎಂದು ದೆಹಲಿ ಪೊಲೀಸ್ ಇಲಾಖೆ ಹೇಳಿದೆ.

Edited By : Vijay Kumar
PublicNext

PublicNext

11/01/2022 07:12 am

Cinque Terre

40.85 K

Cinque Terre

1