ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಪ್ರತಿಯೊಬ್ಬರಿಗೂ ಒಮಿಕ್ರಾನ್ ಹರಡುತ್ತೆ, ಬೂಸ್ಟರ್‌ನಿಂದಲೂ ತಡೆಯಲು ಸಾಧ್ಯವಿಲ್ಲ'

ನವದೆಹಲಿ: ದೇಶದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಾಖಲೆಯ ಮಟ್ಟದಲ್ಲಿ ಏರಿಕೆ ಕಾಣುತ್ತಿದೆ. ಪರಿಣಾಮ ಆತಂಕದ ವಾತಾವರಣ ಎದುರಾಗಿದೆ. ಈ ಮಧ್ಯೆ ಮತ್ತೊಂದು ಆಘಾತಕಾರಿ ವರದಿಯೊಂದು ಹೊರಬಿದ್ದಿದೆ.

ಹೌದು. 'ವ್ಯಾಪಕವಾಗಿ ಹರಡುತ್ತಿರುವ ಈ ಸೋಂಕನ್ನು ನಿಯಂತ್ರಿಸಲು ಬೂಸ್ಟರ್ ಡೋಸ್‌ನಿಂದಲೂ ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಈ ಸೋಂಕು ತಗುಲುವ ಸಾಧ್ಯತೆ ಇದೆ. ಯಾವುದೇ ವ್ಯತ್ಯಾಸವಿಲ್ಲದೇ ವಿಶ್ವದ ಎಲ್ಲಾ ದೇಶಗಳಲ್ಲೂ ಒಮಿಕ್ರಾನ್ ತೀವ್ರಗತಿಯಲ್ಲಿ ಹರಡಲಿದೆ' ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಡಾ.ಜಯಪ್ರಕಾಶ್‌ ಮುಲಿಯಿಲ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಮುಂದೆ ಕೋವಿಡ್ ಭಯಾನಕ ರೋಗವಾಗಿ ಕಾಣಿಸಿಕೊಳ್ಳುವುದಿಲ್ಲ. ಏಕೆಂದರೆ ಹೊಸ ತಳಿ ತನ್ನ ಪರಿಣಾಮದಲ್ಲಿ ಸೌಮ್ಯವಾಗಿದೆ. ಈ ಸೋಂಕಿಗೆ ತುತ್ತಾದವರಲ್ಲಿ ಕಡಿಮೆ ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ನಾವು ನಿಭಾಯಿಸಬಲ್ಲ ಕಾಯಿಲೆ ಇದಾಗಿದೆ. ಇದು ಡೆಲ್ಟಾಗಿಂತ ಹೆಚ್ಚು ಸೌಮ್ಯವಾಗಿದೆ. ಈ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಆದರೆ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Edited By : Vijay Kumar
PublicNext

PublicNext

12/01/2022 01:40 pm

Cinque Terre

26.67 K

Cinque Terre

3