ಹಾಸನ: ಸಾಲಗಾಮೆ ರಸ್ತೆಯಲ್ಲಿರುವ ಮಲೆನಾಡು ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೊರೊನ ಕೇಸ್ ಉಲ್ಭಣಗೊಂಡ ಕಾರಣ ಕಾಲೇಜು ಹಾಗೂ ಹಾಸ್ಟೆಲ್ ಗೂ ಕಾಲೇಜು ಆಡಳಿತ ಮಂಡಳಿ ರಜೆ ಘೋಷಿಸಿದೆ.ಇದರಿಂದ ತಮ್ಮ ತಮ್ಮ ಊರುಗಳಿಗೆ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ.
ಇಂದು ಕಾಲೇಜಿನ ಎಲ್ಲಾ ಸಿಬ್ಬಂದಿಗಳಿಗೂ ಆರೋಗ್ಯ ಇಲಾಖೆ ಕೋವಿಡ್ ಟೆಸ್ಟ್ ಮಾಡುತ್ತಿದ್ದಾರೆ. ಎಚ್.ಓ.ಡಿ. ಸೇರಿ ಹಲವು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.ಯಾವುದೇ ಕ್ರಮ ಕೈಗೊಳ್ಳದ ಆಡಳಿತ ಮಂಡಳಿ ವಿರುದ್ಧ ಕಾಲೇಜಿನ ವಿದ್ಯಾರ್ಥಿಗಳು ಡಿಎಚ್‌ಓಗೆ ಪತ್ರ ಬರೆದಿದ್ದರು.
PublicNext
12/01/2022 01:59 pm