ಬೆಂಗಳೂರು: ಕೊರೊನಾ ಮಹಾಮಾರಿ ರಾಜ್ಯವನ್ನು ಬೆಂಬಿಡದೇ ಕಾಡುತ್ತಿದೆ. ನಿನ್ನೆ ಒಂದೇ ದಿನ ಇಪ್ಪತ್ತು ಸಾವಿರ ಗಡಿ ದಾಟಿದ್ದ ಸೋಂಕಿತರ ಸಂಖ್ಯೆ ಇಂದು 25,005 ಜನರಿಗೆ ಅಂಟಿಕೊಂಡಿದೆ. ಇದರಲ್ಲಿ ಬೆಂಗಳೂರು ಮಹಾನಗರದಲ್ಲಿ 18,374 ಜನರಿಗೆ ಸೋಂಕು ತಗುಲಿದೆ.
ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸಕಾರಾತ್ಮಕತೆ ದರ 12.39%ನಷ್ಟಿದೆ. ಇಂದು 2,363 ಜನ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ 1,15,733 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಹಾಗೂ ಬೆಂಗಳೂರಿನಲ್ಲಿ 91ಸಾವಿರ ಸಕ್ರಿಯ ಪ್ರಕರಣಗಳಿವೆ. ಇನ್ನು ರಾಜ್ಯದಾದ್ಯಂತ ಇಂದು ಎಂಟು ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು 2,01,704 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
13/01/2022 06:32 pm