ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಮಹಾಮಾರಿ ಕೋವಿಡ್ ಅಬ್ಬರ ತೀವ್ರವಾಗಿ ಹೆಚ್ಚುತ್ತಿದೆ. ನಿನ್ನೆ (ಗುರುವಾರ) 25,005 ಜನರಿಗೆ ಸೋಂಕು ದೃಢಪಟ್ಟಿದ್ದರೆ ಇಂದು 28,723 ಜನರಿಗೆ ಕೊರೊನಾ ತಗುಲಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ 31,53,247 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 12.98ನಷ್ಟಿದೆ. ಇಂದು 2,21,205 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 3,105 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,73,470 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 14 ಜನರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,411ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,41,337 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.04ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 20,121 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 13,73,452ಕ್ಕೆ ಏರಿಕೆಯಾಗಿದೆ 1,695 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,47,696ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 7 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,443 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,09,312 ಸಕ್ರಿಯ ಪ್ರಕರಣಗಳಿವೆ.
PublicNext
14/01/2022 07:45 pm