ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತೆ ಹಿಡಿತ ತಪ್ಪುತ್ತಿದೆ ಕೊರೊನಾ: ಇಂದು 34,047 ಜನರಿಗೆ ಸೋಂಕು: 13 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಇತ್ತೀಚಿನ ದಿನಗಳಲ್ಲಿ ಹಿಡಿತಕ್ಕೆ ಸಿಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ 34,047 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 13 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 32,20,087 ಜನರಿಗೆ ಸೋಂಕು ತಗುಲಿದ್ದು 38,431 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 5,902 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,83,645ಕ್ಕೆ ಏರಿಕೆಯಾಗಿದೆ. ಇನ್ನು 1,97,982 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 19.29%ನಷ್ಟಿದೆ. ಮರಣ ಪ್ರಮಾಣ 0.03%ನಷ್ಟಿದೆ. ಇದೇ ಅವಧಿಯಲ್ಲಿ 1,76,470 ಜನರನ್ನು ಕೋವಿಡ್ ಖಚಿತತೆಯ ಪತ್ತೆಗಾಗಿ ಪರೀಕ್ಷೆಗೊಳಪಡಿಸಲಾಗಿತ್ತು.

ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 21,071 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 14,16,807 ಕ್ಕೆ ಏರಿಕೆಯಾಗಿದೆ. 3978 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,54,153ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 5 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,453 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,46,200 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

16/01/2022 07:43 pm

Cinque Terre

124.38 K

Cinque Terre

7

ಸಂಬಂಧಿತ ಸುದ್ದಿ