ಬೆಂಗಳೂರು: ನಗರದ ಹಲವೆಡೆ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಬನ್ನೇರುಘಟ್ಟ ರಸ್ತೆಯ AMC ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
AMC ಕಾಲೇಜಿನ 42 ಮಂದಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಆಗಿದ್ದು ಆರೋಗ್ಯ ಅಧಿಕಾರಿಗಳು ಕಾಲೇಜಿನಲ್ಲಿ ಮುಕ್ಕಾಂ ಹೂಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೆಲವರಿಗೆ ಆರೋಗ್ಯ ಸಮಸ್ಯೆ ಕಂಡು ಬಂದ ಹಿನ್ನೆಲೆ ಯಲ್ಲಿ ಆರೋಗ್ಯ ತಪಾಸಣೆ ಮಾಡಿದಾಗ ಕೊರೊನಾ ಸೋಂಕು ಕಾಣಿಸಿದ್ದು ಒಟ್ಟು 42 ಮಂದಿಗೆ ಪಾಸಿಟಿವ್ ಧೃಡಪಟ್ಟಿದೆ.
ಇನ್ನು ಪ್ರಾಥಮಿಕ ಸಂಪರ್ಕದಲ್ಲಿರುವ 30 ಮಂದಿ ವಿದ್ಯಾರ್ಥಿಗಳಿಗೂ ಸಹ ಟೆಸ್ಟ್ ಮಾಡಲಾಗಿದ್ದು ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ಜೊತೆಗೆ ಕ್ವಾರೆಂಟೈನ್ ಸಹ ಮಾಡಲಾಗಿದೆ. ಇಂದು ಬೆಳಗ್ಗೆ ವೇಳೆಗೆ 42 ಮಂದಿಗೆ ಸೋಂಕು ಖಚಿತವಾಗಿದ್ದು AMC ಕಾಲೇಜಿನ ಎರಡು ಹಾಸ್ಟೆಲ್‌ಗಳನ್ನು ಸೀಲ್ ಡೌನ್ ಮಾಡಿ ಆರೋಗ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನಷ್ಟು ವಿದ್ಯಾರ್ಥಿಗಳಿಗೆ ಪಾಸಿಟಿವ್ ಬರುವ ಸಾಧ್ಯತೆ ಇದ್ದು ಕಾಲೇಜಿನಲ್ಲಿ ಆರೋಗ್ಯ ಅಧಿಕಾರಿಗಳ ತಂಡ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಾಲೇಜು ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.
PublicNext
16/01/2022 07:56 pm