ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು, ಜನರಲ್ಲಿ ಆತಂಕದ ವಾತಾವರಣ ಶುರುವಾಗಿದೆ. ಭಾನುವಾರ ಸಂಜೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, 24 ಗಂಟೆಗಳಲ್ಲಿ 34,047 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 13 ಜನ ಸೋಂಕಿನಿಂದ ಮೃತಪಟ್ಟಿದ್ದರು
ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಲಕ್ಷದ ಸಮೀಪಕ್ಕೆ ಬಂದಿದೆ. ಈ ಮಧ್ಯೆ ಶಾಲೆಗಳಲ್ಲೂ ಸೋಂಕು ಹೆಚ್ಚಾಗಿದ್ದು ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆ ಬಂದ್ ಮಾಡಿ ಇಲಾಖೆ ಆದೇಶ ಹೊರಡಿಸಿದೆ.
ಸೋಂಕು ಹೆಚ್ಚಾಗಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು, ಬಳ್ಳಾರಿ, ಬೆಳಗಾವಿ, ಧಾರವಾಡಗಳಲ್ಲಿ ಶಾಲೆ ಬಂದ್ ಆಗಿದೆ. ಈ ಜಿಲ್ಲೆಗಳಲ್ಲಿ 1 ರಿಂದ 9ನೇ ತರಗತಿ ಬಂದ್ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಯ ಶಾಲೆಗಳಲ್ಲಿ ಸೋಂಕು ಕಾಣಿಸಿಕೊಳ್ಳತ್ತಿರುವುದು ಈಗ ಆತಂಕ್ಕೆ ಎಡೆ ಮಾಡಿದೆ.
PublicNext
17/01/2022 07:00 pm