ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಏರಿಕೆ ಕಂಡಿದ್ದ ಕೊರೊನಾ ಸೋಂಕಿತ ಸಂಖ್ಯೆ ಇಂದು ಕೊಂಚ ಇಳಿಕೆ ಕಂಡಿದೆ. ಶನಿವಾರ 32,793 ಹಾಗೂ ಭಾನುವಾರ 34,047 ಜನರಿಗೆ ಕೊರೊನಾ ದೃಢಪಟ್ಟಿತ್ತು. ಆದರೆ ಇಂದು ಈ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 27,156 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 32,47,243 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 12.45ರಷ್ಟಿದೆ. ಇಂದು 2,17,998 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 7,827 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,91,472 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 14 ಜನರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,445ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2,17,297 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.05ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 15,947 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 14,32,754ಕ್ಕೆ ಏರಿಕೆಯಾಗಿದೆ 4,888 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,59,041ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಐವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,458 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,57,254 ಸಕ್ರಿಯ ಪ್ರಕರಣಗಳಿವೆ.
PublicNext
17/01/2022 08:26 pm