ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತಗ್ಗುವಂತೆ ಕಾಣುತ್ತಿಲ್ಲ. ಇಂದು ಕೂಡ ಸೋಂಕಿತರ ಸಂಖ್ಯೆ 40 ಸಾವಿರ ಗಡಿ ದಾಟಿದೆ. ಅಷ್ಟೇ ಅಲ್ಲದೆ ಹೆಮ್ಮಾರಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ಕೂಡ ಹೆಚ್ಚುತ್ತಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 40,499 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 33,29,199 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 18.80ನಷ್ಟಿದೆ. ಇಂದು 2,15,312 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 23,209 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 30,23,034 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 21 ಜನರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,486ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2,67,650 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.05ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 24,135 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 14,82,484ಕ್ಕೆ ಏರಿಕೆಯಾಗಿದೆ 18,081 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,81,636ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಐವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,470 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 1,84,377 ಸಕ್ರಿಯ ಪ್ರಕರಣಗಳಿವೆ.
PublicNext
19/01/2022 08:50 pm