ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ಕಂಟ್ರೋಲ್ ಗೆ ಸಿಗದ ಕೋವಿಡ್ ಕೇಸ್ : 24 ಗಂಟೆಯಲ್ಲಿ 3.47 ಲಕ್ಷ ಪ್ರಕರಣ, 703 ಮಂದಿ ಸಾವು

ನವದೆಹಲಿ: ಹೆಮ್ಮಾರಿ ಸೋಂಕು ಕೊರೊನಾದಿಂದಾಗಿ ಜನ ಕಂಗಾಲಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 3,47,254 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 703 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,85,66,027ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,88,396ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20,18,825ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,51,777ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,60,58,806ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 19,35,912ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ಈ ವರೆಗೂ 71,15,38,938 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Edited By : Nirmala Aralikatti
PublicNext

PublicNext

21/01/2022 12:33 pm

Cinque Terre

102.49 K

Cinque Terre

0