ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ನಿನ್ನೆಗಿಂತ ಕೊಂಚ ಇಳಿಕೆ ಕಂಡಿದೆ. ನಿನ್ನೆ (ಶುಕ್ರವಾರ) 48,049 ಜನರಿಗೆ ಸೋಂಕು ದೃಢಪಟ್ಟಿತ್ತು. ಈ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದರೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ.
ರಾಜ್ಯದಲ್ಲಿಂದು 42,470 ಜನರಿಗೆ ಸೋಂಕು ಅಂಟಿದೆ. ಇದರಲ್ಲಿ ಬೆಂಗಳೂರು ಮಹಾನಗರದಲ್ಲಿ 17,266 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವಿಟಿ ದರವು ಶೇ 19.33ರಷ್ಟಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಇಂದು 35,140 ಜನ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ 3,30,447 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಹಾಗೂ ಬೆಂಗಳೂರಿನಲ್ಲಿ 2 ಲಕ್ಷ 18 ಸಾವಿರ ಸಕ್ರಿಯ ಪ್ರಕರಣಗಳಿವೆ. ಇನ್ನು ರಾಜ್ಯದಾದ್ಯಂತ ಇಂದು 26 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಅದರಲ್ಲಿ 6 ಜನ ಬೆಂಗಳೂರಿನವರಾಗಿದ್ದಾರೆ. ಇನ್ನು 2,19,699 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
22/01/2022 09:16 pm