ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತಗ್ಗುವಂತೆ ಕಾಣುತ್ತಿಲ್ಲ. ಇಂದು ಕೂಡ ಸೋಂಕಿತರ ಸಂಖ್ಯೆ 40 ಸಾವಿರ ಗಡಿ ದಾಟಿದೆ. ಅಷ್ಟೇ ಅಲ್ಲದೆ ಹೆಮ್ಮಾರಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ಕೂಡ ಏರಿಕೆ ಕಾಣುತ್ತಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 42,470 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 34,67,472 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 19.33ನಷ್ಟಿದೆ. ಇಂದು 2,19,699 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 35,140 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 30,98,432 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 26 ಜನರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,563ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3,30,447 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.06ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 17,266 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 15,59,358ಕ್ಕೆ ಏರಿಕೆಯಾಗಿದೆ 22,511 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 13,24,538ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 6 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,490 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 2,18,329 ಸಕ್ರಿಯ ಪ್ರಕರಣಗಳಿವೆ.
PublicNext
22/01/2022 09:26 pm