ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆಯ ಏರಿಕೆ ಕಂಡಿದೆ. ಶುಕ್ರವಾರ 48,049 ಜನರಿಗೆ, ನಿನ್ನೆ ಶನಿವಾರ 42,470 ಮಂದಿಗೆ ಸೋಂಕು ದೃಢಪಟ್ಟಿತ್ತು. ಆದರೆ ಇಂದು 50 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ಕಾಣಿಸಿಕೊಂಡಿದೆ.
ರಾಜ್ಯದಲ್ಲಿಂದು 50,210 ಜನರಿಗೆ ಸೋಂಕು ಅಂಟಿದೆ. ಇದರಲ್ಲಿ ಬೆಂಗಳೂರು ಮಹಾನಗರದಲ್ಲಿ 26,299 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವಿಟಿ ದರವು ಶೇ 22.77ಕ್ಕೆ ಏರಿಕೆ ಕಂಡಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಇಂದು 22,842 ಜನ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ 3,57,796 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಹಾಗೂ ಬೆಂಗಳೂರಿನಲ್ಲಿ 2 ಲಕ್ಷ 31 ಸಾವಿರ ಸಕ್ರಿಯ ಪ್ರಕರಣಗಳಿವೆ. ಇನ್ನು ರಾಜ್ಯದಾದ್ಯಂತ ಇಂದು 19 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಅದರಲ್ಲಿ 8 ಜನ ಬೆಂಗಳೂರಿನವರಾಗಿದ್ದಾರೆ. ಇನ್ನು 2,20,459 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
23/01/2022 06:47 pm