ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 50 ಸಾವಿರಕ್ಕೂ ಅಧಿಕ ಜನರಿಗೆ ಕೊರೊನಾ- 19 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಇಂದು ದಾಖಲೆಯ 50 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ದೃಢಪಟ್ಟಿದೆ. ಆದರೆ ಸಾವಿನ ಸಂಖ್ಯೆ ನಿನ್ನೆಗಿಂತ ಇಂದು ಕೊಂಚ ಇಳಿಕೆ ಕಂಡಿದೆ.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 50,210 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 35,17,682 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 22.77ಕ್ಕೆ ಏರಿಕೆ ಕಂಡಿದೆ. ಇಂದು 2,20,459 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 22,842 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 31,21,274 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 19 ಜನರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,582ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3,57,796 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.03ನಷ್ಟಿದೆ.

ಬೆಂಗಳೂರು: ನಗರದಲ್ಲಿ ಇಂದು 26,299 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 15,85,657ಕ್ಕೆ ಏರಿಕೆಯಾಗಿದೆ 12,787 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 13,37,325ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 8 ಜನ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,498 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 2,31,833 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

23/01/2022 07:49 pm

Cinque Terre

71.34 K

Cinque Terre

2

ಸಂಬಂಧಿತ ಸುದ್ದಿ