ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ತಾಂಡವ ಆಟವನ್ನು ಮುಂದುವರೆಸಿದೆ. ಕಳೆದ 24 ಗಂಟೆಗಳಲ್ಲಿ 46,426 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 32 ಜನ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 35,64,108 ಜನರಿಗೆ ಸೋಂಕು ತಗುಲಿದ್ದು 38614 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 41,703 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 31,62,977 ಕ್ಕೆ ಏರಿಕೆಯಾಗಿದೆ. ಇನ್ನು 3,62,487 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 32.95%ನಷ್ಟಿದೆ. ಹಾಗೂ ಮರಣ ಪ್ರಮಾಣ 0.06% ನಷ್ಟಿದೆ. ಇದೇ ಅವಧಿಯಲ್ಲಿ 1,40,884 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 21,569 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 16,07,226 ಕ್ಕೆ ಏರಿಕೆಯಾಗಿದೆ. 27,008 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 13,64,333 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 9 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,507 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 226385 ಸಕ್ರಿಯ ಪ್ರಕರಣಗಳಿವೆ.
PublicNext
24/01/2022 09:05 pm