ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ 3 ಲಕ್ಷದ ಗಡಿಯಿಂದ ಕೆಳಗೆ ಇಳಿದಿದೆ. ಆದರೆ ನಿನ್ನೆ (ಮಂಗಳವಾರ)ಕ್ಕಿಂತ ಇಂದು ಸೋಂಕಿತರ ಸಂಖ್ಯೆ ಕೊಂಚ ಏರಿಕೆ ಕಂಡಿದೆ. ನಿನ್ನೆ 2,55,874 ಜನರಿಗೆ ಸೋಂಕು ದೃಢಪಟ್ಟಿತ್ತು.
ಕೇಂದ್ರ ಆರೋಗ್ಯ ಇಲಾಖೆ ಇಂದು ನೀಡಿದ ಮಾಹಿತಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ 2,85,914 ಜನರಿಗೆ ಸೋಂಕು ಕಾಣಿಸಿಕೊಂಡಿದೆ, 665 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,23,018ಕ್ಕೆ ಏರಿದೆ. ಸೋಂಕು ದೃಢ ಪ್ರಮಾಣ ಶೇಕಡ 16.16ರಷ್ಟಿದೆ. 24 ಗಂಟೆಗಳಲ್ಲಿ 2,99,073 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಈವರೆಗೂ 1,63,58,44,536 ಡೋಸ್ ವ್ಯಾಕ್ಸಿನ್ ಹಾಕಲಾಗಿದೆ.
PublicNext
26/01/2022 12:43 pm