ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಅಬ್ಬರ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 48,905 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 39 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 36,54,413 ಜನರಿಗೆ ಸೋಂಕು ತಗುಲಿದ್ದು, 38,705 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 41,699 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 32,57,769 ಕ್ಕೆ ಏರಿಕೆಯಾಗಿದೆ. ಇನ್ನು 3,57,909 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಕೋವಿಡ್ ಖಚಿತತೆಯ ಪ್ರಮಾಣ 22.51%ನಷ್ಟಿದೆ. ಹಾಗೂ ಮರಣ ಪ್ರಮಾಣ 0.07%ನಷ್ಟಿದೆ. ಇದೆ ಅವಧಿಯಲ್ಲಿ 217230 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
26/01/2022 07:47 pm