ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಆರ್ಭಟ ನಿನ್ನೆಗಿಂತ ಇಂದು ಕೊಂಚ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 38,083 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 49 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 36,92,496 ಜನರಿಗೆ ಸೋಂಕು ತಗುಲಿದ್ದು 38,754 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 67,236 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 33,25,001ಕ್ಕೆ ಏರಿಕೆಯಾಗಿದೆ. ಇನ್ನು 3,28,711 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 20.44% ನಷ್ಟಿದೆ. ಇನ್ನು ಮರಣ ಪ್ರಮಾಣ 0.12%ನಷ್ಟಿದೆ. ಇದೇ ಅವಧಿಯಲ್ಲಿ ಕೊರೊನಾ ಖಚಿತತೆಯ ಪತ್ತೆಗಾಗಿ 18,63,313 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ : ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 17,717 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 16,66,475 ಕ್ಕೆ ಏರಿಕೆಯಾಗಿದೆ. 43,997 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 14,60,075ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 12 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,546 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 1,89,853 ಸಕ್ರಿಯ ಪ್ರಕರಣಗಳಿವೆ.
PublicNext
27/01/2022 08:41 pm