ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಭಾವ ಏರುತ್ತ ಇಳಿಯುತ್ತ ಸಾಗಿದೆ. ಕಳೆದ 24 ಗಂಟೆಗಳಲ್ಲಿ 31,198 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 50 ಜನ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 37,23,694 ಜನರಿಗೆ ಸೋಂಕು ತಗುಲಿದ್ದು 38,804 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 71,092 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 33,96,093ಕ್ಕೆ ಏರಿಕೆಯಾಗಿದೆ. ಇನ್ನು 288767 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 20.91%ನಷ್ಟಿದೆ. ಹಾಗೂ ಮರಣ ಪ್ರಮಾಣ 0.16% ನಷ್ಟಿದೆ. ಇದೇ ಅವಧಿಯಲ್ಲಿ 1,49,174 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 15,199 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 16,81,674 ಕ್ಕೆ ಏರಿಕೆಯಾಗಿದೆ. 44,866 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 15,04,941ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಎಂಟು ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,554 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 2,37,518ಸಕ್ರಿಯ ಪ್ರಕರಣಗಳಿವೆ.
PublicNext
28/01/2022 09:00 pm