ಬೆಂಗಳೂರು : ರಾಜ್ಯದಲ್ಲಿಂದು 28,264 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3785295 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 172483 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 16.38% ರಷ್ಟಿದೆ.
ರಾಜ್ಯದಲ್ಲಿ ಇಂದು 29244 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 3495239 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 68 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38942 ಕ್ಕೆ ಏರಿಕೆಯಾಗಿದೆ. 251084 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.24% ನಷ್ಟಿದೆ.
PublicNext
30/01/2022 08:25 pm