ಬೆಂಗಳೂರು: ಕಳೆದ ನಾಲ್ಕೈದು ದಿನಗಳಲ್ಲಿ ಕೊರೊನಾ ಸೋಂಕು ಇಳಿಕೆಯ ಹಾದಿಯಲ್ಲಿದ್ದು ಕಳೆದ 24 ಗಂಟೆಯಲ್ಲಿ 20,505 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 81 ಜನ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 38,44,338 ಜನರಿಗೆ ಸೋಂಕು ತಗುಲಿದ್ದು 39,137 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 40,903 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 36,27,925ಕ್ಕೆ ಏರಿಕೆಯಾಗಿದೆ. ಇನ್ನು 1,77,244 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನ ಖಚಿತತೆಯ ಪ್ರಮಾಣ 12.55%ನಷ್ಟಿದೆ. ಹಾಗೂ ಮರಣ ಪ್ರಮಾಣ 0.39%ನಷ್ಟಿದೆ. ಹಾಗೂ ಇದೇ ಅವಧಿಯಲ್ಲಿ 1,63,320 ಜನರನ್ನು ಕೊರೊನಾ ಖಚಿತತೆ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 8,850 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,36,425 ಕ್ಕೆ ಏರಿಕೆಯಾಗಿದೆ. 21493 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 16,27,340ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 13 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 16,615 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 92,469 ಸಕ್ರಿಯ ಪ್ರಕರಣಗಳಿವೆ.
PublicNext
02/02/2022 08:11 pm