ಬೆಂಗಳೂರು: ಕಳೆದ ಒಂದು ವಾರದಿಂದ ಕೊರೊನಾ ಹರಡುವಿಕೆ ಪ್ರಮಾಣ ಕೊಂಚ ತಗ್ಗಿದೆ. ಇಂದು ರಾಜ್ಯದಲ್ಲಿ 16,436 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹಾಗೂ 60 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು 44,819 ಜನರು ಕೊರೊನಾ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ 1,48,800 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ಇಂದು 1,45,204 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇನ್ನು ರಾಜ್ಯಾದ್ಯಂತ 11.31%ನಷ್ಟು ಕೊರೊನಾ ಪಾಸಿಟಿವಿಟಿ ದರ ಇದೆ.
PublicNext
03/02/2022 07:48 pm