ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಕೊಂಚ ತಗ್ಗಿದೆಯಾದರೂ ಹರಡುವಿಕೆ ಇನ್ನೂ ನಿಂತಿಲ್ಲ. ಕಳೆದ 24 ಗಂಟೆಗಳಲ್ಲಿ 4,452 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 51 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 39,06,761 ಜನರಿಗೆ ಸೋಂಕು ತಗುಲಿದ್ದು 39,447 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 19,067 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 37,94,866 ಕ್ಕೆ ಏರಿಕೆಯಾಗಿದೆ. ಇನ್ನು 72,414 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 5.01%ನಷ್ಟಿದೆ. ಹಾಗೂ ಕೊರೊನಾ ಮರಣ ಪ್ರಮಾಣ 1.14%ನಷ್ಟಿದೆ. ಇದೇ ಅವಧಿಯಲ್ಲಿ 88,797 ಜನರನ್ನು ಕೊರೊನಾ ಖಚಿತತೆಯ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
08/02/2022 07:47 pm