ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತಾಪತ್ರಯ ಇನ್ನೂ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ 5,339 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 48 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 39,12,100 ಜನರಿಗೆ ಸೋಂಕು ತಗುಲಿದ್ದು, 39,495 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 16,749 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 38,11,615ಕ್ಕೆ ಏರಿಕೆಯಾಗಿದೆ. ಇನ್ನು 60,956 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 4.14%ನಷ್ಟಿದೆ. ಹಾಗೂ ಮರಣ ಪ್ರಮಾಣ 0.89%ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 1,28,705 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
09/02/2022 08:11 pm