ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಕೊಂಚ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 3,202 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 38 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 39,24,297 ಜನರಿಗೆ ಸೋಂಕು ತಗುಲಿದ್ದು 39,613 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 8,988 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 38,45,903ಕ್ಕೆ ಏರಿಕೆಯಾಗಿದೆ. ಇನ್ನು 38,747 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ 2.95%ನಷ್ಟಿದೆ. ಇನ್ನು ಮರಣ ಪ್ರಮಾಣ 1.18%ನಷ್ಟಿದೆ. ಇದೇ ಅವಧಿಯಲ್ಲಿ 1,08,534 ಜನರನ್ನು ಕೊರೊನಾ ಖಚಿತತೆ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
12/02/2022 07:21 pm