ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ದಿನದಿಂದ ದಿನಕ್ಕೆ ಭಾರಿ ಇಳಿಕೆ ಕಾಣುತ್ತಿದೆ. ಆದರೂ ಕೊರೊನಾ ನಿಯಮ ಪಾಲನೆಯನ್ನು ಪಾಲಿಸುವ ಅಗತ್ಯವಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 1,568 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,28,237 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 2.25ರಷ್ಟಿದೆ. ಇಂದು 69,546 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 6,025 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 38,57,323 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 25 ಜನರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 39,665ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 31,215 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ ಶೇ 1.59ನಷ್ಟಿದೆ.
PublicNext
14/02/2022 07:23 pm