ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 1,137 ಜನರಿಗೆ ಕೊರೊನಾ- 3,870 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 1,137 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 13,431 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 1.43% ರಷ್ಟಿದೆ. ಇಂದು 79312 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 3,870 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 38,82,340 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 20 ಜನರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 39,777ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 13,431 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.75% ನಷ್ಟಿದೆ.

Edited By :
PublicNext

PublicNext

19/02/2022 08:17 pm

Cinque Terre

27.21 K

Cinque Terre

1

ಸಂಬಂಧಿತ ಸುದ್ದಿ