ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಇತ್ತೀಚಿನ ದಿನಗಳಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 588 ಜನರಿಗೆ ಸೋಂಕು ತಗುಲಿದೆ. ಹಾಗೂ 19 ಜನ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 39,39,287 ಜನರಿಗೆ ಸೋಂಕು ತಗುಲಿದ್ದು 39,885 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,692 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 38,91,110ಕ್ಕೆ ಏರಿಕೆಯಾಗಿದೆ. ಇನ್ನು 8,255 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ 0.84%ನಷ್ಟಿದೆ. ಹಾಗೂ ಮರಣ ಪ್ರಮಾಣ 3.23%ನಷ್ಟಿದೆ. ಹಾಗೂ 69,388 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
24/02/2022 08:16 pm