ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಇತ್ತೀಚಿನ ದಿನಗಳಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 278 ಜನರಿಗೆ ಸೋಂಕು ತಗುಲಿದೆ. ಹಾಗೂ ಮೂವರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 39,42,346 ಜನರಿಗೆ ಸೋಂಕು ತಗುಲಿದ್ದು 39988 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 458 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 38,99,034ಕ್ಕೆ ಏರಿಕೆಯಾಗಿದೆ. ಇನ್ನು 3,286 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ 0.53%ನಷ್ಟಿದೆ. ಹಾಗೂ ಮರಣ ಪ್ರಮಾಣ 1.07%ನಷ್ಟಿದೆ. ಹಾಗೂ 52,215 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
05/03/2022 07:40 pm