ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 106 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,43,912 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.45ರಷ್ಟಿದೆ. ಇಂದು 23,050 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 337 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,01,430 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,022ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2,420 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ ಶೇ 3.77ನಷ್ಟಿದೆ.
PublicNext
14/03/2022 08:56 pm