ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 109 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,45,079 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.34ರಷ್ಟಿದೆ. ಇಂದು 32,015 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 117 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,03,201 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,044ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,792 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ ಶೇ 1.83ರಷ್ಟಿದೆ.
PublicNext
24/03/2022 07:47 pm