ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 79 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 3945247 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.26% ರಷ್ಟಿದೆ. ಇಂದು 29372 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 94 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು3903380 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ಒಬ್ಬ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40049 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,776 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.26% ನಷ್ಟಿದೆ.
PublicNext
26/03/2022 07:48 pm