ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 64 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,45,311 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.24ರಷ್ಟಿದೆ. ಇಂದು 26,596 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 62 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,03,442 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ಒಬ್ಬರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,050ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,777 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ ಶೇ 1.56ರಷ್ಟಿದೆ.
PublicNext
27/03/2022 08:19 pm