ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 45 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,46,221 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.44ರಷ್ಟಿದೆ. ಇಂದು 10,119 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 54 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,04,693 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,057ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,429 ಸಕ್ರಿಯ ಪ್ರಕರಣಗಳಿವೆ.
PublicNext
14/04/2022 09:04 pm