ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ಭಾನುವಾರ 54, ಸೋಮವಾರ 53, ಮಂಗಳವಾರ 62 ಕೊರೊನಾ ಕೇಸ್ ಪತ್ತೆಯಾಗಿದ್ದವು. ಈ ಸಂಖ್ಯೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 61 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,46,545 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.62ರಷ್ಟಿದೆ. ಇಂದು 9,704 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 49 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,04,947 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,057ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,499 ಸಕ್ರಿಯ ಪ್ರಕರಣಗಳಿವೆ.
PublicNext
20/04/2022 09:10 pm