ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ 4ನೇ ಅಲೆ ಬಗ್ಗೆ ಭಯ ಬೇಡ, ಆದ್ರೆ ಎಚ್ಚರ ಇರಲಿ: ಡಾ. ದೇವಿಪ್ರಸಾದ್ ಶೆಟ್ಟಿ

ಬೆಂಗಳೂರು: ದೇಶದ ವಿವಿಧ ಭಾಗಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗುತ್ತಿದ್ದು, ಇದು ಕೊರೋನಾ 4ನೇ ಅಲೆಗೆ ಆರಂಭವೇ ಎಂಬ ಆತಂಕದ ಕುರಿತು ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ ದೇವಿ ಪ್ರಸಾದ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಇದು ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಬಗ್ಗೆ ಆತಂಕ ಮೂಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ ದೇವಿ ಪ್ರಸಾದ್ ಶೆಟ್ಟಿ ಅವರು, ಭಯ ಬೇಡ ಎಚ್ಚರ ವಹಿಸಿ ಎಂದು ಸಲಹೆ ನೀಡಿದ್ದಾರೆ.

ಈ ಕುರಿತು ಸೋಮವಾರ ಮಾತನಾಡಿದ ಅವರು, ಕೋವಿಡ್-19 ನಾಲ್ಕನೇ ಅಲೆಯ ಕುರಿತು ಭಯ ಪಡುವ ಅಗತ್ಯವಿಲ್ಲ. ಕೊಂಚ ಎಚ್ಚರ ಮತ್ತು ಏಕಾಗ್ರತೆ ವಹಿಸಿದರೆ ಸಾಕು. ನಮ್ಮ ಕಾಳಜಿ ಸೋಂಕಿಗೆ ತುತ್ತಾದವರ ಮೇಲಲ್ಲ. ಬದಲಾಗಿ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾದವರ ಮೇಲಿರಬೇಕು ಎಂದು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

25/04/2022 05:30 pm

Cinque Terre

26.21 K

Cinque Terre

3