ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ನಿನ್ನೆಗಿಂತ ಇಂದು ಕೊರೊನಾ ಕೊಂಚ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತ ಕಾಣುತ್ತಿದೆ. ನಿನ್ನೆ (ಗುರುವಾರ) 154 ಜನರಿಗೆ ಸೋಂಕು ದೃಢಪಟ್ಟಿತ್ತು. ಇಂದು ಈ ಸಂಖ್ಯೆ ಕೊಂಚ ಇಳಿಕೆ ಕಂಡಿದೆ.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 133 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,47,496 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 1.16ರಷ್ಟಿದೆ. ಇಂದು 11,415 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 147 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,05,660 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,057ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,737 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

29/04/2022 09:54 pm

Cinque Terre

82.76 K

Cinque Terre

0